March 24, 2026

ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

0
IMG-20230603-WA00281.jpg

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿಯಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದ್ದು, ಢಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ.

ಈ ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯ ಸುಮಿತ್‌ ನಲ್ಲೂರು ಸೇರಿದಂತೆ ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!