August 12, 2026

ಸಬ್‍ಇನ್‍ಸ್ಪೆಕ್ಟರ್ ಪತ್ನಿಯ ಅನುಮಾನಾಸ್ಪದ ಸಾವು: ಕೊಲೆ ಶಂಕೆ

0
image_editor_output_image-2019538136-1685855084910.jpg

ಬೆಂಗಳೂರು: ನಗರದ ಸಬ್‍ಇನ್‍ಸ್ಪೆಕ್ಟರ್ ಒಬ್ಬರ ಮೇಲೆ ಪತ್ನಿಗೆ ಕಿರುಕುಳ ನೀಡಿ ಕೊಲೆಗೈದ ಆರೋಪ ಕೇಳಿ ಬಂದಿದೆ.

ಮೃತ ಮಹಿಳೆಯನ್ನು ಶಿಲ್ಪಾ (33) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ರಮೇಶ್ ಅವರ ಮೇಲೆ ಶಿಲ್ಪಾ ಪೊಷಕರು ಕೊಲೆ ಆರೋಪ ಹೊರಿಸಿದ್ದಾರೆ. ಅಲ್ಲದೆ ನಿರಂತರ ಪತ್ನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ.

ರಮೇಶ್ ಹಾಗೂ ಶಿಲ್ಪಾ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಐದಾರು ವರ್ಷಗಳಿಂದ ಲಿವಿಂಗ್ ಟುಗೇದರ್ ರಿಲೇಶನ್‍ಶಿಪ್‍ನಲ್ಲಿದ್ದರು. ಆದರೆ ಮದುವೆಯಾಗಲು ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದ.

ಬಳಿಕ ಹಠಬಿಡದೆ ಪೊಲೀಸರ ಸಮ್ಮುಖದಲ್ಲಿ ಶಿಲ್ಪಾ, ರಮೇಶ್‍ನನ್ನು ಮದುವೆಗೆ ಒಪ್ಪಿಸಿದ್ದಳು.

ಮದುವೆ ಬಳಿಕ ಮನೆಯವರು ಒಪ್ಪುತ್ತಿಲ್ಲ ಎಂದು ಪತ್ನಿಗೆ ಪ್ರತ್ಯೇಕ ಮನೆ ಮಾಡಿಕೊಟ್ಟಿದ್ದ. ಆದರೆ ಜೀವನಕ್ಕೆ ಯಾವುದೇ ಅರ್ಥಿಕ ನೆರವು ನೀಡುತ್ತಿರಲಿಲ್ಲ.

ಪದೇ ಪದೇ ಜಾತಿ ನಿಂದನೆ ಮಾಡಿ, ತನ್ನ ಅಕ್ಕನ ಮಗಳನ್ನು ಮದುವೆಯಾಗಲು ನೀನು ಅಡ್ಡಿಯಾಗಿದ್ದೀಯಾ ಮನೆಬಿಟ್ಟು ಹೋಗು ಎಂದು ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ದೂರಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!