August 12, 2026

ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

0
image_editor_output_image-474320871-1685858788788.jpg

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಗಮಂಗಲ ತಾಲೂಕಿನ ತಿರುಮಲಾಪುರ ಗ್ರಾಮದ ಬಳಿ ಘಟನೆ ನಡೆಯಿತು. ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ.

ಮೃತರನ್ನು ಹೇಮಂತ್, ನವೀನ್, ಶರತ್ ಎಂದು ಗುರುತಿಸಲಾಗಿದೆ. ನಾಗಮಂಗಲದ ಬಿಜಿಎಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!