March 23, 2026

ಸುರತ್ಕಲ್ | ರಸ್ತೆ ಅಪಘಾತ: ರಸ್ತೆ ಬದಿ ಮಲಗಿದ್ದ ಇಬ್ಬರು ಕೂದಲೆಯ ಅಂತರದಲ್ಲಿ ಪಾರು

0
image_editor_output_image684234965-1685859144620.jpg

ಸುರತ್ಕಲ್: ತಡಂಬೈಲ್ ನಲ್ಲಿ ರವಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್‌ ಬ್ಲಾಸ್‌ ಆಗಿದ್ದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಉಡುಪಿ ಕಡೆಯಿಂದ ವೋಕ್ಸ್ ವ್ಯಾಗನ್ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ.

ಈ ವೇಳೆ ರಸ್ತೆ ಬದಿ ಮಲಗಿದ್ದ ಇಬ್ಬರು ಕೂದಲೆಯ ಅಂತರದಲ್ಲಿ ಜೀವ ಉಳಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!