March 23, 2026

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಮೃತ್ಯು

0
image_editor_output_image-1442362580-1685866350244.jpg

ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ.

ತಮಾಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮದ್ಯಪ್ರದೇಶದ್ ಮೂಲದ ಬುಡಕಟ್ಟು ಕುಟುಂಬಕ್ಕೆ ಸೇರಿದ 2 ವರ್ಷದ‌ ಹೆಣ್ಣು ರೋಶನಿಯನ್ನು ಸುಮಾರು 21 ಗಂಟೆಗಳ ಕಾರ್ಯಾಚರಣೆ ಬಳಿಕ ಹೊರತೆಗೆಯಲಾಯಿತದರೂ , ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ಧೃಡಪಡಿಸಿದ್ದಾರೆ.

ಶನಿವಾರ ಬೆಳಗ್ಗೆ 9:30 ಗಂಟೆಯ ಸುಮಾರಿಗೆ ಆಟವಾಡುತ್ತಿದ್ದಾಗ ಕೃಷಿ ಜಮೀನಲ್ಲಿದ್ದ 200 ಅಡಿ ಆಳದ ತೆರೆದ ಕೊಳವೆ ಬಾವಿಗೆ ರೋಶನಿ ಬಿದ್ದಿದ್ದಳು.

20 ಆಳದಲ್ಲಿ ಸಿಲುಕಿದ್ದ ಮಗುವನ್ನು ಸತತ ಕಾರ್ಯಾಚರಣೆಯ ಬಳಿಕ ಭಾನುವಾರ ಮುಂಜಾನೆ 5:45ರ ಸಮಯಕ್ಕೆ ಹೊರ ತೆಗೆಯಲಾಗಿತ್ತು.

Leave a Reply

Your email address will not be published. Required fields are marked *

error: Content is protected !!