August 13, 2026

ಸುಳ್ಯಪದವು: ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಸಾವು

0
image_editor_output_image-2085554591-1685944297224.jpg

ಸುಳ್ಯಪದವು: ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜೂ.5 ರ ಮುಂಜಾನೆ ನಡೆದಿದೆ.

ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಮೃತಪಟ್ಟ ವ್ಯಕ್ತಿ.

ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದರು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ.

ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!