August 13, 2026

ಬೆಳ್ತಂಗಡಿ: ಬಸ್, ದ್ವಿಚಕ್ರ ವಾಹನ ನಡುವೆ ಅಪಘಾತ: ವಾಹನ ಸವಾರ ಮೃತ್ಯು

0
IMG-20230605-WA0022.jpg

ಬೆಳ್ತಂಗಡಿ: ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ.

ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದ ಬಸ್ ಮತ್ತು ಉಜಿರೆ ಕಡೆ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಬಸ್ಸಿನ ಚಕ್ರದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!