March 20, 2026

ಪರಾರಿ ಕೂಲಿ ಕಾರ್ಮಿಕರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಕೊಲೆ ಪ್ರಕರಣ ಆರೋಪಿಗಳಿಗೆ ಗಲ್ಲುಶಿಕ್ಷೆ ಜಾರಿಗೊಳಿಸಿ ಜೆಡಿಎಸ್ ಮಹಿಳಾ ನಾಯಕಿ ಡಾ ಸುಮತಿ ಎಸ್ ಹೆಗ್ಡೆ ಒತ್ತಾಯ

0
IMG-20211125-WA0010.jpg

ಮಂಗಳೂರು: ರಾಜ್ಯ, ದೇಶದ ವಿವಿಧೆಡೆ ಶಾಲಾ ಮಕ್ಕಳ ಸಹಿತ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಇತ್ತೀಚಿಗೆ ಪರಾರಿಯಲ್ಲಿ ಎಂಟರ ಹರೆಯದ ಮುಗ್ದ ಹುಡುಗಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಂದು ಡ್ರೈನೇಜ್ ಗೆ ಬಿಸಾಡಿದ ದುರುಳರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತಾ ಮೃತ ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜೆಡಿಎಸ್ ನಾಯಕಿ ಡಾ ಸುಮತಿ ಯಸ್ ಹೆಗಡೆ ಮಂಗಳೂರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ,ಕೊಲೆ, ದೌರ್ಜನ್ಯಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದರು. ಇತ್ತೀಚಿಗೆ ವಿದ್ಯಾರ್ಥಿನಿಯರ ಮೇಲೆ, ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಶಾಲಾ-ಕಾಲೇಜು, ಕಾರ್ಖಾನೆ ಜನ ನಿಭಿಡ ಪ್ರದೇಶಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ಪೋಲಿಸ್ ಸಿಬ್ಬಂದಿಯನ್ನು ಬಸ್ ನಿಲ್ದಾಣ ಮತ್ತು ನಗರ ಪ್ರದೇಶದಿಂದ ದೂರವಿರುವ ಕಾಲೇಜುಗಳ ಬಳಿ ನಿಯೋಜನೆ ಮಾಡುವಂತೆ ಒತ್ತಾಯಿಸಿದರು

Leave a Reply

Your email address will not be published. Required fields are marked *

You may have missed

error: Content is protected !!