August 13, 2026

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
 

0
Siddaramaiah_01.jpg

ದಾವಣಗೆರೆ : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ , ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣ ಕುರಿತು ಚರ್ಚೆ ನಂತರ ಜು. 7 ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದರು.

ಇನ್ನು ಬಜೆಟ್ ವಿಚಾರವಾಗಿ ಪೂರ್ವಭಾವಿ ಸಭೆಗಳು ನಡೆದಿಲ್ಲ. ‌ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲಾಗುವುದಿಲ್ಲ. ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ 2.43 ಲಕ್ಷ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!