August 13, 2026

ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image572757602-1686026728334.jpg

ಕೋಲಾರ: ಆಕೆ ಮಕ್ಕಳ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನು ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಹೇಳಿ ಕೊನೆಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಭಾನುವಾರ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ (24) ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯರವ ಕಿರುಕುಳದ ಆರೋಪ ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!