ಕಮಲಾಪುರದ ಜೋಡಿ ಕೊಲೆ ಪ್ರಕರಣ: ಪಿಸ್ತೂಲ್ ನೀಡಿದ್ದ ಆರೋಪಿಯ ಬಂಧನ
ಧಾರವಾಡ: ಹುಬ್ಬಳ್ಳಿ, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ಕಮಲಾಪುರದ ಜೋಡಿ ಕೊಲೆಗೆ ಪಿಸ್ತೂಲ್ ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರೌಡಿಶೀಟರ್ ಮಂಜು ಸಾವಂತ ಎಂದು ಗುರುತಿಸಲಾಗಿದೆ. ಇದುವರೆಗೂ ಪ್ರಕರಣದಲ್ಲಿ ಒಟ್ಟು 7 ಅರೋಪಿಗಳನ್ನು ಬಂಧಿಸಲಾಗಿತ್ತು.
ಈತನ ಬಂಧನದಿಂದಾಗಿ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




