March 21, 2026

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಕೇಸ್ ಗಳನ್ನು ವಾಪಸ್ ಪಡೆಯಲು ಆಗ್ರಹ

0
image_editor_output_image-826942830-1686036988386.jpg

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಎಲ್ಲಾ ಕೇಸುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರವರಿಗೆ ಮನವಿ ಮಾಡಿದ್ದಾರೆ.

ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಅನೇಕ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಿವಿಧ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಬಿಜೆಪಿ ಸರಕಾರದ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ, ಧರಣಿ ಹಾಗೂ ಪ್ರತಿಭಟನಾ ರ್ಯಾಲಿಗಳನ್ನು ಮಾಡುವ ವೇಳೆ ಅವರ ವಿರುದ್ದ ರಾಜಕೀಯ ಪ್ರೇರಿತ ವಾಗಿ ಕೇಸುಗಳನ್ನು ದಾಖಲಿಸಲಾಗಿದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾದ ಎಲ್ಲಾ ಕೇಸುಗಳನ್ನು ಮರು ತನಿಖೆ ಮಾಡಬೇಕು ಮತ್ತು ಅವರ ಮೇಲಿನ ಕೇಸುಗಳನ್ನು ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!