ಮಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಪ್ರಕರಣ:
ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಕಮಿಷನರ್ ಗೆ ಮನವಿ ಸಲ್ಲಿಸಿದ 4ನೇ ತರಗತಿ ಬಾಲಕಿ
ಮಂಗಳೂರು: ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮನುಷತ್ವವನ್ನೇ ಪ್ರಶ್ನಿಸುವಂತ ಘಟನೆಯಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕೆಂದು ನಾಲ್ಕನೆ ತರಗತಿಯ ಬಾಲಕಿಯೊಬ್ಬಳು ಇಲ್ಲಿನ ಮಹಾನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಅವರಿಗೆ ಮನವಿ ಮಾಡಿದ್ದಾಳೆ.
ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಬಾಲಕಿ ಮನವಿಇತ್ತೀಚೆಗೆ ಉಳಾಯಿಬೆಟ್ಟು ಎಂಬಲ್ಲಿ 8 ವರ್ಷದ ಬಾಲಕಿಯೊಬ್ಬಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿತ್ತು. ಕೇಸ್ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನ ಕುಳಾಯಿಯ ನಿರಂಜನ್ ಮತ್ತು ಪವಿತ್ರ ಎಂಬವರ ಮಗಳಾದ ಪಣಂಬೂರು ಕೇಂದ್ರೀಯ ವಿದ್ಯಾಲಯದಲ್ಲಿ ನಾಲ್ಕನೆ ತರಗತಿಯಲ್ಲಿ ಕಲಿಯುತ್ತಿರುವ ಚಾರ್ವಿ ನಿರಂಜನ್ ಕೂಡ ಪೊಲೀಸ್ ಕಮಿಷನರ್ ಅನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾಳೆ.
ಆರೋಪಿಗಳ ಬಂಧನವಾಗಿದ್ದು ಸದರಿ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇನೆ. ಇನ್ನಾದರೂ ಸಣ್ಣ ಹೆಣ್ಣು ಮಕ್ಕಳ ಮೇಲೆ ಇಂತಹ ಘಟನೆಗಳು ಮರುಕಳಿಸದಂತೆ ಕೇಳಿಕೊಳ್ಳುತ್ತೇನೆ” ಎಂದು ಮನವಿ ಪತ್ರದಲ್ಲಿ ಬಾಲಕಿ ಉಲ್ಲೇಖಿಸಿದ್ದಾಳೆ.





