ಸಚಿವ ಗೋವಿಂದ ಕಾರಜೋಳ ಕಾರು ಅಪಘಾತ:
ಬೈಕ್ ಸವಾರನಿಗೆ ಗಾಯ
ಬೆಂಗಳೂರು: ಸಚಿವ ಗೋವಿಂದ ಕಾರಜೋಳ ಪಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಕಾರು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದೆ ಎನ್ನಲಾಗಿದೆ.
ಘಟನೆ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದದಿದ್ದು, ಸಚಿವರು ತುಮಕೂರಿನಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಈ ಪ್ರಕರಣ ನೆಲಮಂಗಲ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ತಾಳೆಕೆರೆ ಗ್ರಾಮದ ಕೃಷ್ಣಮೂರ್ತಿ ಬೈಕ್ ಸವಾರ. ಅಪಘಾತದ ನಂತರ ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಕಳುಹಿಸಿ ಸಚಿವರು ತಾವೂ ಆಸ್ಪತ್ರೆಗೆ ಭೇಟಿ ನೀಡಿದರು. ಚಿಕಿತ್ಸೆಯ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಹರೀಶ್ ಅವರಿಗೆ ಸೂಚನೆ ನೀಡಿದರು.





