May 11, 2026

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ: ಬಂಧಿತನಾಗಿದ್ದ ಆರೋಪಿ ಮೃತ್ಯು

0
IMG-20230607-WA0009.jpg

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.

ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!