May 11, 2026

ಬೇಕರಿಯಲ್ಲಿ ಐಸ್‌ಕ್ರೀಮ್‌ ತೆಗೆದುಕೊಂಡು ಬರುವಾಗ ಟ್ರ್ಯಾಕ್ಟರ್‌ ಢಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

0
image_editor_output_image-685271902-1686198816740.jpg

ಬೆಂಗಳೂರು: ಅಣ್ಣನ ಜೊತೆ ಬೇಕರಿಯಲ್ಲಿ ಐಸ್‌ಕ್ರೀಮ್‌ ತೆಗೆದುಕೊಂಡು ಬರುವಾಗ ಟ್ರ್ಯಾಕ್ಟರ್‌ ವಾಟರ್‌ ಟ್ಯಾಂಕರ್‌ ಡಿಕ್ಕಿ ಹೊಡೆದು ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಸಮೀಪದ ಸಿಕೆ ಪಾಳ್ಯದಲ್ಲಿ ನಡೆದಿದೆ.

ಬಾಲಕ ಭುವನ್‌ (4) ಮೃತಪಟ್ಟ ದುರ್ದೈವಿ. ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್‌ ವಾಟರ್‌ ಟ್ಯಾಂಕರ್‌ ಚಲಾಯಿಸಿದ್ದ ಎನ್ನಲಾಗಿದೆ. ಅಪಘಾತವಾಗುತ್ತಿದ್ದಂತೆ ಟ್ಯಾಂಕರ್‌ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಭುವನ್‌ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್‌ಕ್ರೀಮ್ ತೆಗೆದುಕೊಂಡು ಬರುವಾಗ ವಾಟರ್‌ ಟ್ಯಾಂಕರ್‌ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!