August 12, 2026

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ನೇಣುಬಿಗಿದು ಆತ್ಮಹತ್ಯೆ

0
image_editor_output_image-252142829-1686204524952.jpg

ಮಂಗಳೂರು: ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25) ಆತ್ಮಹತ್ಯೆ ಮಾಡಿದ ಯುವತಿ.

ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.

ಬ್ಯಾಂಕ್ ಸಾಲದಿಂದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.

Leave a Reply

Your email address will not be published. Required fields are marked *

You may have missed

error: Content is protected !!