August 12, 2026

ಮಂಗಳೂರು: ದ.ಕ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

0
dead-4-1.jpg

ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಬಾಲಕೃಷ್ಣ (58. ವ) ಎಂಬವರು ಜೂ.8ರಂದು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮಾಲಾಡಿ ಕೋರ್ಟ್‌ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿಗಿದ್ದು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಮನೆಯ ಮಹಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!