ಭೋಪಾಲ್:ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ 7 ಜನ ಮೃತಪಟ್ಟ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಮದ್ವಾಸ್‍ನಲ್ಲಿ ನಡೆದಿದೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮೇಲೆ ಉರುಳಿದೆ. ಇದರ ಪರಿಣಾಮ ಸ್ಥಳದಲ್ಲೇ 7 ಜನ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.