March 22, 2026

ಉಡುಪಿ | ಥೀಮ್ ಪಾರ್ಕ್ ಬಳಿ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image-2081884629-1686291807886.jpg

ಉಡುಪಿ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.

ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತಪಟ್ಟ ದುರ್ದೈವಿ.

ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!