March 22, 2026

ಬಂಟ್ವಾಳದ ಯುವಕನನ್ನು ಪೆಟ್ರೋಲ್ ಸುರಿದು ಹತ್ಯೆ: ಗುಡ್ಡದಲ್ಲಿ ಮೃತದೇಹ ಎಸೆದು ಪರಾರಿ

0
image_editor_output_image7079947-1686320971292

ಬಂಟ್ವಾಳ: ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ.
ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಫಯಾಜ್ ಅವರು ಮದುವೆಯಾಗಿದ್ದು, ಬಳಿಕ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಹೇಳಲಾಗಿದೆ.
ಈತ ಗಾಂಜ ಮಾರಾಟ ದಂದೆಯಲ್ಲಿ ತೊಡಗಿದ್ದಲ್ಲದೆ,ಗಾಂಜಾ ವ್ಯಸನಿಯಾಗಿದ್ದ ಎಂದು ಹೇಳಲಾಗಿದೆ. ಸಂಸ್ಕೃತ ಕುಟುಂಬದ ಯುವಕನಾಗಿದ್ದ ಈತನ ಕೆಟ್ಟ ಬುದ್ದಿಯಿಂದ ಬೇಸೆತ್ತ ಮನೆಯವರು ಇವನನ್ನು ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ.
ಗಾಂಜಾ ವಹಿವಾಟು ಜೋರಾಗಿ ನಡೆಸುತ್ತಿದ್ದ ಈತನಿಗೆ ಗಾಂಜಾ ಪೆಡ್ಲರ್ ಗಳ ಜೊತೆ ಅತಿಯಾದ ಸಂಪರ್ಕ ಇತ್ತು‌ಎನ್ನಲಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇವರೊಳಗೆ ಹಣಕಾಸಿನ ಅಥವಾ ಗಾಂಜಾ ವಿಚಾರದಲ್ಲಿ ವೈಮಸ್ಸು ಉಂಟಾಗಿ ಈತನನ್ನು ಸುಮಾರು ಹತ್ತು ದಿನಗಳ ಹಿಂದೆ ಇರಾದಿಂದ ಕಿಡ್ನಾಪ್ ಮಾಡಿದ್ದರು ಎನ್ನಲಾಗಿದೆ.

ಬಳಿಕ ಯಾವುದೋ ಅಜ್ಞಾತ ಸ್ಥಳದಲ್ಲಿ ಈತನನ್ನು ಕೂಡಿ ಇಟ್ಟು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿದ್ದಾರೆ.
ವಗ್ಗ ಅಥವಾ ಕಾವಳಕಟ್ಟೆ ಮೂಲದ ಯುವಕರು ಈತನ ಕೊಲೆಯ ಹಿಂದೆ ಇರುವ ಆರೋಪಿಗಳು ಎಂಬ ಮಾಹಿತಿ ಪೋಲೀಸ್ ಇಲಾಖೆ ಲಭ್ಯವಾಗಿದೆ.
ಸ್ನೇಹಿತ ಗಾಂಜಾ ವ್ಯಸನಿಗಳಿಗೆ ಈತನ‌ಕಿಡ್ನಾಪ್ ಬಗ್ಗೆ ಮಾಹಿತಿ ಇತ್ತು ಎನ್ನಲಾಗಿದೆ.
ಸ್ನೇಹಿತರೇ ಈತನ‌ ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಆರೋಪಿಗಳ ಪತ್ತೆಗಾಗಿ‌ ಪೋಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!