ಪ್ರಿಯತಮೆಯನ್ನು ಕೊಂದು ಮೃತದೇಹವನ್ನು ಮನೆಯ ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಆರೋಪಿ
ಲಕ್ನೋ: ವ್ಯಕ್ತಿಯೋರ್ವ ತನ್ನ ಪ್ರಿಯತಮೆಯನ್ನು ಕೊಂದು ಆಕೆಯ ಶವವನ್ನು ನಿರ್ಮಾಣ ಹಂತದಲ್ಲಿರುವ ತನ್ನ ಮನೆಯ ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.
ರಾಜ್ ಕೇಸರ್ (35) ಕೊಲೆಯಾದ ಮಹಿಳೆ. ಯಮುನಾಪರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಹೇವಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ಅರವಿಂದ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಈತ 15 ದಿನಗಳ ಹಿಂದೆ ತನ್ನ ಪ್ರೇಯಸಿಯನ್ನು ಕೊಂದು ನಿರ್ಮಾಣ ಹಂತದಲ್ಲಿರುವ ತನ್ನ ಮನೆಯ ಟ್ಯಾಂಕ್‌ನಲ್ಲಿ ಆಕೆಯ ಶವವನ್ನು ಬಚ್ಚಿಟ್ಟಿದ್ದ ಎಂದು ಸ್ಟೇಷನ್ ಹೌಸ್ ಆಫೀಸರ್ (SHO) ತಿಳಿಸಿದ್ದಾರೆ. ಇ




