March 23, 2026

ಬಂಟ್ವಾಳ | ಗ್ರಾಪಂ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು: ಆರೋಪಿಗಳ ಬಂಧನ

0
image_editor_output_image250362839-1686379590589.jpg

ಬಂಟ್ವಾಳ: ಗ್ರಾಮ ಪಂಚಾಯತ್‌ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ.

ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ , ಅಲ್ಲಿಪಾದೆ ಪುರುಷೋತ್ತಮ ಮೂವರು ಬಂಧಿತ ಆರೋಪಿಗಳು.

ಆರೋಪಿಗಳು ಅಮ್ಟಾಡಿ ಗ್ರಾಮಪಂಚಾಯತ್ ನಲ್ಲಿ ನಡೆಯತ್ತಿದ್ದ ಕಟ್ಟಡ ಕಾಮಗಾರಿಗೆಂದು ತಂದು ದಾಸ್ತಾನು ಮಾಡಲಾಗಿದ್ದ ಕಬ್ಬಿಣದ ರಾಡ್ ಗಳನ್ನು ಮಾರ್ಚ್ ತಿಂಗಳಿನ 18 ರಂದು ಕಳವು ಮಾಡಿದ್ದರು.

ಕಟ್ಟಡ ಕಾಮಗಾರಿ ನಡೆಸಲು ತಂದಿರಿಸಿದ ಕಬ್ಬಿಣದ ಸೊತ್ತುಗಳು ಕಳವಾದ ಬಗ್ಗೆ ಇಲ್ಲಿನ ಪಿಡಿಒ ರವಿ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು.

ಆ ಬಳಿಕ ಪೋಲಿಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು.

Leave a Reply

Your email address will not be published. Required fields are marked *

error: Content is protected !!