ಬಂಟ್ವಾಳ: ಅನಮಾನಾಸ್ಪದವಾಗಿ ಮೃತಪಟ್ಟ ಸವಾದ್ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ
ಬಂಟ್ವಾಳ: ಸಂಶಯಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ಸವಾದ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ ನೀಡಿದರು.
ಈ ವೇಳೆ ಸಂಶಯಾಸ್ಪದವಾಗಿ ಸಾವಿಗೀಡಾದ ಕುಕ್ಕಾಜೆ ಸವಾದ್ ಘಟನೆಯ ಬಗ್ಗೆ ಸೂಕ್ತವಾಗಿ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರಗಿಸಿ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು ರಚಿಸಿ ವರದಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.




