March 24, 2026

ಮನೆಗೆ ನುಗ್ಗಿ ಯುವತಿಯ ಬರ್ಬರವಾಗಿ ಹತ್ಯೆ

0
image_editor_output_image717009740-1686399459382.jpg

ತುಮಕೂರು: ಮನೆಯ ರೂಮಿಗೆ ನುಗ್ಗಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವೊಂದು ತುಮಕೂರು ನಗರದ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ.

ವೀಣಾ (23) ಮೃತ ದುರ್ದೈವಿ. ಈಕೆ ಪ್ರಿಯಕರ ನಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ.

ಮೂಲತಃ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ಈಕೆ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದಳು. ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಈಕೆಯ ವಾಸವಿದ್ದ ರೂಮಿಗೆ ನುಗ್ಗಿ ಕತ್ತು ಕೊಯ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ.

ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!