March 25, 2026

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್

0
IMG-20230611-WA0001.jpg

ಬಂಟ್ವಾಳ: ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾ.ಹೆ.75 ರ ತುಂಬೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಬಸ್ ಚರಂಡಿಗೆ ಉರುಳಿದ ಪರಿಣಾಮ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಬೇರೆ ವಾಹನಗಳಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.

ಇನ್ನು ಮಳೆಯ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಮಣ್ಣು ಸಡಿಲಗೊಂಡಿದ್ದು, ಚಕ್ರಗಳು ಜಾರಿ ಚರಂಡಿಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!