February 4, 2026

ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

0
IMG-20230611-WA0016.jpg

ಬೆಂಗಳೂರು,: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್​ ಕಾರ್ಡ್​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.ಈ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್​ ನೀಡಲಾಯಿತು.

ಇನ್ನು ಇಂದಿನಿಂದ ಸರ್ಕಾರಿ ಸಾರಿಗೆ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಪ್ರಯಾಣಿಸಬಹುದು. ಆದರೆ ಯಾವುದಾದರು ಗುರುತಿನ ಚೀಟಿ ಇರಲೇ ಬೇಕು.

ಫ್ರೀ ಬಸ್ ಪಾಸ್​ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇದಕ್ಕೆ ಮೂರು ತಿಂಗಳು ಸಮಯ ನೀಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!