February 3, 2026

ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆ: ಇಬ್ಬರು ಸಾವು

0
image_editor_output_image1099409101-1686549210678.jpg

ಬೆಂಗಳೂರು: ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ಬೆಂಗಳೂರಿನ ಚಿಕ್ಕಜಾಲದಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ಮನೆಯಲ್ಲಿದ್ದ ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ ಮತ್ತು ಸುಧಾರಾಣಿ ಜೋಡಿ ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ನಲ್ಲಿ ಉದ್ಯೋಗದಲ್ಲಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.

ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದ್ದು, ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ಒಡೆದು ನೋಡಿದಾಗ ಇಬ್ಬರ ಶವ ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!