February 3, 2026

ಪುತ್ತೂರು: ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಕೊಕ್ಕಡ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image493145899-1686550279644.jpg

ಪುತ್ತೂರು: ಪಡೀಲ್ ನಲ್ಲಿರುವ ಹಾಸ್ಟೆಲ್‌ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಕ್ಕಡ ಮೂಲದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪಾ ದಂಪತಿ ಪುತ್ರಿ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರ ತಂದೆ ಕೂಲಿ ಕೆಲಸ ಮಾಡುತ್ತಿದ್ದು ರೇಖಾ, ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದರು.

ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ರೇಖಾ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಖಾಳನ್ನು ಅತ್ತೆ ಒತ್ತಾಯದ ಮೇರೆಗೆ ಪುತ್ತೂರಿನ ಪಡೀಲ್‌ನಲ್ಲಿರುವ ಹಾಸ್ಟೆಲ್ ಗೆ ಸೇರಿಸಿ ಓದುವಂತೆ ಹೇಳುತ್ತಿದ್ದಳು ಎನ್ನಲಾಗಿದೆ.

ಮಾನಸಿಕ ಖಿನ್ನತೆಗೆ ಒಳಗಾದ ರೇಖಾ ಇಲಿಪಾಷನ ಸೇವಿಸಿ ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಜೂ.11 ರಂದು ನಿಧನರಾಗಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!