September 27, 2026

ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ ಬಿದ್ದು ಬಾಲಕಿ ಸಾವು

0
image_editor_output_image-804121100-1686567787883.jpg

ಹಾವೇರಿ: ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‍ನಲ್ಲಿ ಭಾರೀ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ದರಿಂದಾಗಿ ಬಾಲಕಿ ಬಾಗಿಲ ಬಳಿಯೇ ನಿಂತಿದ್ದಳು. ದುರಾದೃಷ್ಟವಶಾತ್ ಆಯತಪ್ಪಿ ಕೆಳಗಡೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!