ಕಾರುಗಳ ನಡುವೆ ಅಪಘಾತ: ನಟಿ ರುಬೀನಾ ಆಸ್ಪತ್ರೆಗೆ ದಾಖಲು
ಮುಂಬೈ: ಕಿರುತೆರೆಯ ಖ್ಯಾತ ನಟಿ, ಹಿಂದಿಯ ಬಿಗ್ ಬಾಸ್ ವಿನ್ನರ್ ರುಬೀನಾ ದಿಲೈಕ್ ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ರುಬೀನಾಗೆ ತೀವ್ರ ಗಾಯಗಳಾಗಿವೆ.
ಬೆನ್ನಿಗೆ ಮತ್ತು ತಲೆಗೆ ಪೆಟ್ಟು ಬಿದ್ದು ಕಾರಣದಿಂದಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತಿದ್ದ ರುಬೀನಾ ಕಾರಿಗೆ, ಹಿಂದಿನಿಂದ ಬಂದ ಟಾಟಾ ಯೋಧ ಟ್ರಕ್ ಗುದ್ದಿದೆ. ಪರಿಣಾಮ ರುಬೀನಾ ಅವರ ಬೆನ್ನು ಮತ್ತು ತೆಲೆಗೆ ಪೆಟ್ಟುಬಿದ್ದಿದೆ.
ಫೋನ್ ನಲ್ಲಿ ಮಾತನಾಡುತ್ತಾ ಟ್ರಕ್ ಓಡಿಸುತ್ತಿದ್ದ ವ್ಯಕ್ತಿಯಿಂದಾಗಿ ಇದೀಗ ರುಬೀನಾ ಆಸ್ಪತ್ರೆ ಸೇರಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ ರುಬೀನಾ ಪತಿ, ನಟ ಅಭಿನವ್ ಶುಕ್ಲಾ




