February 2, 2026

Whatsapp ಡಿಪಿಯಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಫೊಟೋ ಹಾಕಿದ್ದ ವ್ಯಕ್ತಿಯ ಬಂಧನ

0
image_editor_output_image-1520096607-1686634727997.jpg

ಮುಂಬೈ: ಮೊಘಲ್ ಚಕ್ರವರ್ತಿ ಔರಂಗಜೇಬ್ ಚಿತ್ರವನ್ನು ತನ್ನ ವಾಟ್ಸಾಪ್ ಪ್ರೊಫೈಲ್ ಫೋಟೋವನ್ನಾಗಿ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 298 ಅಡಿಯಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು 153 ಎ ಅಡಿಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪ್ರಕರಣ ದಾಖಲಿಸಲಾಗಿದೆ.

ಬಂಧನದ ಬಳಿಕ ಆತನನ್ನು ವಿಚಾರಣೆ ನಡೆಸಿ, ಸೂಕ್ತ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!