February 1, 2026

ಲಾರಿಗೆ ಕಾರು ಹಿಂದಿನಿಂದ ಢಿಕ್ಕಿ: ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತ್ಯು

0
image_editor_output_image1088421585-1686646989650.jpg

ಕೊಪ್ಪಳ: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.

ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್‌ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಕಾರು ಲಾರಿಯ ಕೆಳಭಾಗಕ್ಕೆ ನುಗ್ಗಿದ್ದು, ಅಪಘಾತದ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು. ಕಾರಿನಲ್ಲಿ ಮೂವರು ಮಾತ್ರ ಇದ್ದರು.

ಘಟನಾ ಸ್ಥಳಕ್ಕೆ ಸರ್ಕಲ್‌ ಇನ್‌ಸ್ಪೆಕ್ಟರ್ ಎನ್‌.ಆರ್‌.ನಿಂಗಪ್ಪ, ಸಬ್‌ ಇನ್‌ಸ್ಪೆಕ್ಟರ್ ಮೌನೇಶ ರಾಠೋಡ ಭೇಟಿ ನೀಡಿದ್ದರು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!