February 1, 2026

ಕಡಬ: ಅಸೌಖ್ಯದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು

0
IMG-20230613-WA0018.jpg

ನೆಲ್ಯಾಡಿ: ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವರು ಜೂ.12ರಂದು ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಹಾಗೂ ಹೇಮಾವತಿ ದಂಪತಿಯ ಪುತ್ರಿ, ಉಜಿರೆಯ ಖಾಸಗಿ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ(17ವ.) ಮೃತಪಟ್ಟವರು.

ಶ್ರಾವ್ಯ ಕೆಲ ದಿನದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದರು. 10 ದಿನದ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಪುತ್ತೂರಿನ ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೂ.12ರಂದು ಮೃತಪಟ್ಟಿದ್ದಾರೆ.

ಮೃತರು ತಂದೆ ನಾಗೇಶ್ ನಳಿಯಾರ್, ತಾಯಿ ಹೇಮಾವತಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!