February 1, 2026

ಮಂಗಳೂರು: ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ
 

0
News-11-ksrtc.jpg

ಮಂಗಳೂರು: ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು:

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಪೋರ್ಟಲ್ ಐಡಿ https://sevasindhu.karnataka.gov.in/Sevasindhu/Kannada?ReturnUrl=%2F ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಥವಾ ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ. 30 ರೂ.ಗಳ ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ಹೆಸರು, ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಕಳುಹಿಸಲಾಗುವುದು. ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕ ನಗದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯು.ಪಿ.ಐ ಮೂಲಕ ಪಾವತಿಸಿ ಪಾಸ್ ಪಡೆಯಬಹುದು.

ಸರ್ಕಾರವು ರಾಜ್ಯದ ಮಹಿಳೆಯರಿಗೆ(ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸು ಪಡೆಯುವ ಅಗತ್ಯವಿದೆ. ಈ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸ್ ಪಡೆಯಬಹುದು.

Leave a Reply

Your email address will not be published. Required fields are marked *

error: Content is protected !!