February 3, 2026

ಮಂಗಳೂರು: ವೈದ್ಯನ ಕಾಮಪುರಣ ಬಯಲು:
ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ
ವೀಡಿಯೋ ವೈರಲ್

0
image_editor_output_image910504047-1637906881343

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬನ ಕಾಮಪುರಾಣ ಬಯಲಾಗಿದೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಸ್ಪತ್ರೆಯ 9 ಮಂದಿ ಮಹಿಳಾ ಸಿಬ್ಬಂದಿ ಜೊತೆಗೆ ರತ್ನಾಕರ್ ಅಸಭ್ಯವಾಗಿ ವರ್ತಿಸಿದ್ದಾನೆ. ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸಿದ್ದಾನೆ. ಮಹಿಳಾ ಸಿಬ್ಬಂದಿ ಮೂಲಕ ರತ್ನಾಕರ್ ಪಾದ ಸೇವೆ ಮಾಡಿದ್ದಾನೆ. ಇಬ್ಬಿಬ್ಬರು ಮಹಿಳಾ ಸಿಬ್ಬಂದಿಯನ್ನು ಕೂರಿಸಿಕೊಂಡು ರತ್ನಾಕರ್ ಆಸ್ಪತ್ರೆಯಲ್ಲಿಯೇ ರಂಗಿನಾಟ ಆಡಿದ್ದಾನೆ.

ಸರ್ಕಾರಿ ವೈದ್ಯನಾಗಿರುವ ರತ್ನಾಕರ್ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾನೆ. ಒಂದು ವೇಳೆ ರತ್ನಾಕರ್ ಜೊತೆಗೆ ಸಹಕರಿಸದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುವ ಅಥವಾ ಟ್ರಾನ್ಸ್‍ಫರ್ ಮಾಡಿಸುವ ಹೀಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ. ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು.

ರತ್ನಾಕರ್ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಆತ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ರತ್ನಾಕರ ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!