ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಚನ್ನಬಸಪ್ಪ ಕೆ. ಅವರನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪಾಲಿಕೆ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚನ್ನಬಸಪ್ಪ ಅವರನ್ನು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿತ್ತು.
ಇದೀಗ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.