February 1, 2026

ಮಂಗಳೂರು| ಬಾಲಕಿಯ ಅಪಹರಿಸಿ ಅತ್ಯಾಚಾರ: ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ

0
image_editor_output_image-1578960518-1686720515978.jpg

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿ ಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ್ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ್ (33) ಶಿಕ್ಷೆಗೊಳಗಾದವರು.

ಪಿಯುಸಿ ವಿದ್ಯಾರ್ಥಿನಿ 2022ರ ಎ.12ರ ಮಧ್ಯಾಹ್ನ 12.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗುವ ಟಿಕೆಟ್ ಪಡೆಯಲೆಂದು ನಿಂತಿದ್ದಾಗ ಅಲ್ಲಿಗೆ ಬಂದ ಆರೋಪಿಗಳು ಆಕೆಯ ಬಳಿ ತೆರಳಿ ಟಿಕೆಟ್ ಮಾಡಿಸಿಕೊಡುವುದಾಗಿ ಹೇಳಿದ್ದರು.

ಬಳಿಕ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆಯುವಂತೆ ನಟಿಸಿ ‘ಇಲ್ಲಿ ಟಿಕೆಟ್ ಸಿಗುವುದಿಲ್ಲ. ಕಾರವಾರದಲ್ಲಿ ಟಿಕೆಟ್ ತೆಗೆಸಿಕೊಡುತ್ತೇವೆ. ಅಲ್ಲಿಗೆ ಹೋಗೋಣ’ ಎಂದು ನಂಬಿಸಿ ಆಕೆಯನ್ನು ರೈಲಿನಲ್ಲಿ ಕಾರವಾರಕ್ಕೆ ಕರೆದೊಯ್ದಿದ್ದರು ಎಂದು ಆರೋಪಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!