March 25, 2026

ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ  ಯುವತಿ ಬಂಟ್ವಾಳ ನಗರ ಠಾಣೆ ಹಾಜರಿ

0
image_editor_output_image898080933-1686794966951

ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೊಬೈಲ್ ಗೆ ಮೆಸೇಜ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೆ ಯುವತಿ ಠಾಣೆಗೆ ಹಾಜರಾದ ಘಟನೆ ಜೂನ್ 14 ರಂದು ಬುಧವಾರ ನಡೆದಿದೆ.

ಬೈಪಾಸ್ ಬಿ.ಕಸಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಅವರು ನಾಪತ್ತೆಯಾಗಿದ್ದಾಳೆ ಎಂದು ಈಕೆಯ ಅಣ್ಣ ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದ.
ದೂರಿನಲ್ಲಿ ಈಕೆಗೆ ಮದುವೆ ಮಾಡುವ ಬಗ್ಗೆ ಸಂಬಂಧ ಹುಡುಕುವ ವೇಳೆ ನೇಹಾ ನಾನು ಸದ್ಯ ಮದುವೆ ಆಗುವುದಿಲ್ಲ ವಿದ್ಯಾಭ್ಯಾಸ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ್ದಳು‌.

ಈಕೆ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿಗೆ ಎಂದು ಮನೆಯಿಂದ ಹೋದವಳು ಮನೆಗೆ ವಾಪಾಸು ಬರದೆ ನಾಪತ್ತೆಯಾಗಿದ್ದಳು.

ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ ಮೆಸೇಜ್ ಮಾಡಿ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ನಾನು ಬೆಂಗಳೂರಿಗೆ ಹೋಗುವುದಾಗಿ ತಿಳಿಸಿದ್ದಳು.

ಇದಾದ ಬಳಿಕ ಎರಡು ಪತ್ರ ಬರೆದಿದ್ದು ಅದರಲ್ಲಿ ನಾನು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದ್ದಳು .
ಎರಡು ಪತ್ರ ಕಳುಹಿಸಿದ ಬಳಿಕ ಮೊಬೈಲ್ ಕೂಡ ಸ್ವಿಚ್ ಆಪ್ ಆಗಿದ್ದು ,ಮನೆಯವರ ಜೊತೆ ಯಾವುದೇ ಸಂಪರ್ಕ ಮಾಡಿಲ್ಲ .ಈ ಕಾರಣಕ್ಕಾಗಿ ಈಕೆಯ ತಮ್ಮ ಕಾಣೆಯಾಗಿದ್ದಾಳೆ ಎಂದು ಪೋಲೀಸ್ ಠಾಣೆಗೆ ದೂರು ನೀಡಿದ್ದ.

ಠಾಣೆಗೆ ಹಾಜರು
ನೇಹಾ ಇಂದು ನೇರವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆ ಗೆ ಹಾಜರಾಗಿದ್ದಾಳೆ. ಅಲ್ಲದೆ ಪೋಲೀಸರಿಗೆ ಹೇಳಿಕೆಯೊಂದನ್ನು ನೀಡಿದ್ದಾಳೆ.
ಅವಳು ನೀಡಿದ ಹೇಳಿಕೆ ಏನು ಅಂತಿರಾ? ನಾನು ಸ್ವ ಇಚ್ಛೆಯಿಂದ ಮನೆ ಬಿಟ್ಟು ಹೋಗಿದ್ದು, ನನಗೆ ನನ್ನ ಮನೆಯವರೊಂದಿಗೆ ಹೋಗಲು ಇಚ್ಚೆ ಇರುವುದಿಲ್ಲ.

ನಾನು ಮುಂದಕ್ಕೆ ವೃತ್ತಿಯೊಂದಿಗೆ ವಿದ್ಯಾಭ್ಯಾಸ ಮುಂದುವರೆಸಲು ಹಾಗೂ ಬದುಕಲು ನಿಶ್ವಯಿಸಿದ್ದು, ಅ ಉದ್ದೇಶದಿಂದ ನಾನು ಉಡುಪಿಯ ಅಜೆಕಾರು ಕುಂಜಿಬೆಟ್ಟು ಎಂಬಲ್ಲಿರುವ ಶ್ರೀ ದುರ್ಗಾ ಮಹಿಳೆಯರ ಪಿ.ಜಿಮಗೆ ತೆರಳಿ ಅಲ್ಲಿಯೇ ವಾಸ್ತವ್ಯ ಇದ್ದು ನನ್ನ ವಿದ್ಯಾಭ್ಯಾಸ ಮುಂದುವರಿಸಲು ಇಚ್ಚಿಸಿರುತ್ತೇನೆ ಎಂದು ತಿಳಿಸಿದ್ದಾಳೆ.
ಇವಳು ನೀಡಿದ ಹೇಳಿಕೆಯನ್ನು ಮತ್ತು ನಿರ್ಧಾರವನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮನೆಯವರಿಗೆ ತಿಳಿಸಿದ್ದು ಅವಳನ್ನು ಕಳುಹಿಸಿಕೊಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!