February 3, 2026

ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರುವಾಗ ಗಲಾಟೆ: ಅತ್ತೆಗೆ ಚಾಕುವಿನಿಂದ ಇರಿದ ಪತಿ

0
image_editor_output_image-73353093-1686804624232.jpg

ಬೆಂಗಳೂರು: ವ್ಯಕ್ತಿಯೊಬ್ಬ ತವರು ಮನೆಗೆ ತೆರಳಿದ್ದ ತನ್ನ ಪತ್ನಿಯನ್ನು ಕರೆದುಕೊಂಡು ಬರಲೆಂದು ಹೋಗಿ ಅತ್ತೆಗೆ ಚಾಕು ಇರಿದ ಪರಾರಿಯಾಗುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಗೀತಾ ಅಳಿಯ ಮನೋಜ್ ನಿಂದ ಚಾಕು ಇರಿತಕ್ಕೊಳಾಗದ ಅತ್ತೆ. ಈ ಘಟನೆ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ.

ಈ ವೇಳೆ ಮಂಡ್ಯ ಮೂಲದ ವರ್ಷಿತಾ ಪರಿಚಯವಾಗಿ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ ಪತ್ನಿ ಗಂಡನ ಮನೆ ಬಿಟ್ಟು ತವರು ಮನೆಗೆ ಬಂದಿದ್ದ.
ಹೆಂಡತಿಯನ್ನು ಜೊತೆಗೆ ಕಳುಹಿಸಿ ಕೊಡುವಂತೆ ಅತ್ತೆಯ ಜೊತೆಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅಳಿಯ ಅತ್ತೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!