ಲಂಡನ್: ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್‌ನ ಯುವತಿ ಕೊಲೆ
ಲಂಡನ್: ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್‌ನ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಲಂಡನ್‌ನ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್‌ನಲ್ಲಿ ನಡೆದಿದೆ.
ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ಕೋತಂ ತೇಜಸ್ವಿನಿ (27) ಯುವತಿಯನ್ನು ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ತೇಜಸ್ವಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಜೊತೆಗೆ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ 24 ಮತ್ತು 23 ವರ್ಷದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.




