March 25, 2026

‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
image_editor_output_image-1548441049-1686809728633.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಾಳೆ (ಜೂ.16) ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ’ ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ’ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!