March 25, 2026

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ತಂದೆ, ಮಗನಿಗೆ 20 ವರ್ಷ ಜೈಲು ಶಿಕ್ಷೆ

0
image_editor_output_image-360496601-1686892763664.jpg

ಉಡುಪಿ: ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ದಾವಣಗೆರೆ ಮೂಲದ ಶಿವಶಂಕರ್‌ (58) ಹಾಗೂ ಆತನ ಮಗ ಸಚಿನ್‌ (28) ಶಿಕ್ಷೆಗೆ ಗುರಿಯಾದ ಆರೋಪಿಗಳು.

14 ವರ್ಷದ ನೊಂದ ಬಾಲಕಿ ತನ್ನ ತಾಯಿ ಜತೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಅದೇ ಮನೆಯಲ್ಲಿ ತಾಯಿಯ ಸ್ನೇಹಿತ ಶಿವಶಂಕರ್‌ ಕೂಡ ವಾಸವಾಗಿದ್ದ.

ಲಾಕ್‌ಡೌನ್‌ ಸಮಯದಲ್ಲಿ 2020ರ ಎಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ಹೋಗುತ್ತಿದ್ದರು.

ಆ ಸಮಯದಲ್ಲಿ ಶಿವಶಂಕರ್‌ ಬಾಲಕಿಯನ್ನು ಹಲವು ಬಾರಿ ದೈಹಿಕ ಸಂಪರ್ಕ ಮಾಡಿರುವುದಾಗಿ ದೂರಲಾಗಿದೆ. ಶಿವಶಂಕರ್‌ ಮಗ ಸಚಿನ್‌, ಕೂಡ ಮನೆಯಲ್ಲಿ ಬಾಲಕಿ ಒಬ್ಬಳೇ ಇರುವಾಗ ಮೇ ತಿಂಗಳಲ್ಲಿ ಅತ್ಯಾಚಾರ ಎಸಗಿದ್ದ.

ಈ ವಿಚಾರವನ್ನು ಬಾಲಕಿ ನೆರೆಮನೆಯವರಲ್ಲಿ ಹೇಳಿ ಕೊಂಡಿದ್ದಳು. ನೆರೆಮನೆ ಮಹಿಳೆ ಮಕ್ಕಳ ಸಹಾಯ ವಾಣಿಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!