July 1, 2026

ಐದು ಪ್ರಕರಣಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್

0
ezgif-sixteen_nine_223.jpg


 
ಬೆಂಗಳೂರು: ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೋವಿಡ್ ನಿಯಮ ಉಲ್ಲಂಘಿಸಿ ಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ್ದ ಆರೋಪದ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ 5 ಪ್ರಕರಣಗಳಿಂದ ಹೈಕೋರ್ಟ್ ರಿಲೀಫ್ ನೀಡಿದೆ. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ಎಲ್ಲ ಪ್ರಕರಣಗಳನ್ನೂ ರದ್ದು ಮಾಡುವಂತೆ ಆದೇಶಿಸಿದೆ.

ಕಳೆದ ಶುಕ್ರವಾರ, ಹೈಕೋರ್ಟ್ ಶಿವಕುಮಾರ್ ಅವರ ವಿರುದ್ಧದ ಒಂದು ಪ್ರಕರಣವನ್ನು ರದ್ದುಗೊಳಿಸಿತ್ತು. ಶಿವಕುಮಾರ್ ಅವರು ಪಾದಯಾತ್ರೆ ವೇಳೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಹಾಗೂ ತಡೆ ಕೋರಿ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.”

Leave a Reply

Your email address will not be published. Required fields are marked *

You may have missed

error: Content is protected !!