ಶಿವಮೊಗ್ಗ | ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆ: ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ
ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ನಿವಾಸಿ ಮಂಜುನಾಥ್ (23) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ 11 ದಿನಗಳ ಹಿಂದೆ ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ಈ ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.




