May 12, 2026

ಚಿಪ್ಸ್ ತಯಾರಿಸುವ ಬಾಣಲೆಗೆ ಬಿದ್ದಿದ್ದ ಯುವಕ ಮೃತ್ಯು

0
image_editor_output_image1321003654-1686978359389.jpg

ಚಿಕ್ಕಮಗಳೂರು: ಚಿಪ್ಸ್ ಕರೆಯುವ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ.

ಸಂದೇಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಸಂದೇಶ್ ಕಿಕ್ರೆ ಗ್ರಾಮದಲ್ಲಿ ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಚಿಪ್ಸ್‌ ಫ್ಯಾಕ್ಟರಿಯಲ್ಲಿ 20 ಕ್ಕೂ ಹೆಚ್ಚು ಯುವಕರು ಕೆಲಸ ಮಾಡುತ್ತಿದ್ದಾರೆ.

ಕಳೆದ 13 ದಿನಗಳ ಹಿಂದೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವೇಳೆ ಚಿಪ್ಸ್ ಕರೆಯುವ ಒಲೆಗೆ ತಾಪಮಾನ ಹೆಚ್ಚಿರಲಿ, ಎಣ್ಣೆ ಬೇಗ ಬಿಸಿಯಾಗಲಿ ಎಂಬ ಕಾರಣಕ್ಕೆ ಎಣ್ಣೆ ಅಂಶ ಇರುವ ಮತ್ತು ತಾಪಮಾನವೂ ಹೆಚ್ಚಿರುವ ಗೇರು ಬೀಜಗಳನ್ನ ಹಾಕುತ್ತಾರೆ.

ಹೊಗೆ ಹೆಚ್ಚಾಗಿ ಕಟ್ಟಿಕೊಂಡಿದ್ದ ಹೊಗೆ ಪೈಪ್ ಕ್ಲೀನ್ ಮಾಡಲು ಫ್ಯಾಕ್ಟರಿಯ ಮೇಲ್ಛಾವಣಿಗೆ ಹತ್ತಿದ್ದ ಸಂದೇಶ್ ಆಯಾ ತಪ್ಪಿ ಸೀದಾ ಚಿಪ್ಸ್ ಕರೆಯುವ ದೊಡ್ಡ ಬಾಣಲೆಗೆ ಬಿದ್ದಿದ್ದ.

ಸಂದೇಶ್‌ ದೇಹದ 80% ರಷ್ಟು ಭಾಗ ಸುಟ್ಟು ಹೋಗಿತ್ತು. ಕೂಡಲೇ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಕಳೆದ 13 ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಡಿದ್ದ ಸಂದೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಸಂದೇಶ್ ಮೇಲ್ಘಾವಣಿಗೆ ಹತ್ತಿದಾಗ ಕಬ್ಬಿಣದ ರಾಡ್ ಮೇಲೆ ನಡೆದು ಹೋಗಿದ್ದರೆ ಯಾವುದೇ ಅನಾಹುತ ಸಂಭವಿಸುತ್ತಿರಲಿಲ್ಲ. ಆದರೆ ಸಂದೇಶ್ ಸಿಮೆಂಟ್ ಶೀಟ್‍ಗಳ ಮೇಲೆ ನಡೆದು ಹೋದ ಪರಿಣಾಮ ಆಯಾತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!