May 12, 2026

ವಂಚನೆ: ನಟಿ ಉಷಾ ಬಂಧನ

0
image_editor_output_image-1029067357-1686980400720.jpg

ಬೆಂಗಳೂರು: ದುನಿಯಾ ವಿಜಯ್ ನಟನೆಯ ಸಲಗ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ ಬಂಧನಕ್ಕೆ ಒಳಗಾಗಿದ್ದಾರೆ.

ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದಾರೆ.
ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರಂತೆ. ಪ್ರೀತಿ, ಮದುವೆಯ ನಂಬಿಕೆಯಲ್ಲೇ ಆ ನಟನಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ನಂತರ ಮದುವೆ ಮಾಡಿಕೊಳ್ಳಲು ತಕರಾರು ತಗೆದಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!