ಸಮಸ್ಯೆಯ ಆಗರವಾದ ವಿಟ್ಲ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಸತಿನಿಲಯ
ವಿಟ್ಲ: ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಗ್ರಾಮೀಣ ಭಾಗದಲ್ಲಿ ವಸತಿ ನಿಲಯಗಳನ್ನು ನಿರ್ಮಿಸಿದೆ.ಆದರೇ ಅದರ ನಿರ್ವಹಣೆ ಮಾಡುವ ಅಧಿಕಾರಿಗಳ ಉದಾಸೀನ ಪ್ರವೃತ್ತಿ, ದಿವ್ಯ ನಿರ್ಲಕ್ಷ್ಯದಿಂದಾಗಿ ಅದು ಸಮಸ್ಯೆಯ ಆಗರವಾಗಿ ಪರಿವರ್ತಿತವಾಗಿದೆ.
ವಿದ್ಯಾರ್ಥಿಗಳನ್ನು ಕೈ ಬೀಸಿ ಕೈಬಿಸಿ ಕರೆಯ ಬೇಕಾದ ಈ ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳ ಪಾಲಿಗೆ ನರಕ ಸದೃಶ್ಯವಾಗಿದೆ.
ಗ್ರಾಮೀಣ ಬಾಗದ ಅದರಲ್ಳೂ ವಿಶೇಷವಾಗಿ ಬಡ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹಲವು ವರ್ಷಗಳ ಹಿಂದೆ ವಿಟ್ಲ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭಿಸಲಾಯಿತು.
ಸರ್ಕಾರಿ ಮಾದರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅನುದಾನಿತ ವಿಠಲ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಸೇರಿ ಸ್ಥಳೀಯ ಸಂಸ್ಥೆಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ಬಂದಿರುವ ಮಹಿಳಾ ಶಿಕ್ಷಾಣಾರ್ಥಿಗಳು ಪುತ್ತೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ವಸತಿ ನಿಲಯದ ಫಲಾನುಭವಿಗಳು.
ಈ ಸಾಲಿನ ಶೈಕ್ಷಣಿಕ ವರ್ಷ ಆರಂಭದ ಅಮಯ ವಸತಿ ನಿಲಯಕ್ಕೆ ಆಗಮಿಸಿದ ಹೊರ ಜಿಲ್ಲೆಗಳಿಂದ ಆಗಮಿಸಿದ ನೂತನ ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಿಲ್ಲ ಎಂಬ ಕಾರಣ ನೀಡಿ ವಅಧಿಕಾರಿಗಳು ಅವರನ್ನು ರಸ್ತೆಯಲ್ಲಿ ಕೂರುವಂತೆ ಮಾಡಿದ್ದರು.
ಬಳಿಕ ಆವ್ಯವಸ್ಥೆಯನ್ನು ಸರಿಪಸುವ ಕಾರ್ಯವಾಯಿತು. ಸದ್ಯ 40ವಿದ್ಯಾರ್ಥಿಗಳು ಈ ವಸತಿ ನಿಲಯದ ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿ ಮಕ್ಕಳಿಗೆ ಒದಗಿಸುವ ದೇವರಿಗೆ ಪ್ರೀತಿ. ಹಸಿದ ವಿದ್ಯಾರ್ಥಿನಿಯರ ಹೊಟ್ಟೆಯನ್ನು ತಂಪಾಗಿಸಬೇಕಾದ ಅನ್ನ ಗಬ್ಬು ನಾರುತ್ತಿದೆ ಎನ್ನುವುದು ಅಲ್ಲಿನ ಮಕ್ಕಳ ಅಳಲು.




