August 25, 2026

ಪುತ್ತೂರು: ಧಿಡೀರ್‌ ಅಸ್ವಸ್ಥಗೊಂಡ ಎಂಬಿಎ ವಿದ್ಯಾರ್ಥಿ ಮೃತ್ಯು: ಪರೀಕ್ಷೆ ಬರೆದು ಮನೆಗೆ ಬಂದಿದ್ದ ಶರತ್‌ ಜೋಶಿ

0
IMG-20230617-WA0024.jpg

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ಮೃತಪತ್ತಿರುವ ಘಟನೆ ನಡೆದಿದೆ.

ಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್‌ ಜೋಶಿ (21) ಮೃತ ಯುವಕ.

ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್‌ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ಏನಾಯ್ತೋ ಏನೋ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು, ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಮೃತ ಹೊಂದಿದ್ದಾರೆ.

ದಿಢೀರ್‌ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕರಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ.

ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!