March 24, 2026

ನಾಳೆಯಿಂದ ಸರಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಆರಂಭ: ಅರ್ಜಿ ಸಲ್ಲಿಸುವುದು ಹೇಗೆ?

0
gruhajyoti-200units-free.jpg

ಬೆಂಗಳೂರು: ಜುಲೈ 1ರಿಂದ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು, ಹಾಗಾಗಿ ಭಾನುವಾರದಿಂದ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. https://sevasindhugss.karnataka.gov.in ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿಗೆ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ನಾಳೆಯಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!